https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಮಲ್ನಾಡ್ ಸುದ್ದಿ 🚨ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಹೈ ವೋಲ್ಟೇಜ್ ಸಭೆ ಮಂತ್ರಿಗಳಾದ ಮಧು ಬಂಗಾರಪ್ಪ ಆಗಮನ – ಕಾರ್ಯಕರ್ತರಿಗೆ ಕರೆ📍 ತೀರ್ಥಹಳ್ಳಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ (ಮೇ 27) ಇಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಂಟರ ಭವನದಲ್ಲಿ ಮಹತ್ವದ ಕಾರ್ಯಕರ್ತರ ಸಭೆ ನಡೆಯಲಿದೆ.👉 ಈ ಸಭೆಯಲ್ಲಿ

  • ಜೂನ್ 1ರಂದು ನಡೆಯಲಿರುವ ಸನ್ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮ
  • ವಿಶೇಷ ತೀವ್ರ ಮತದಾರರ ಪರಿಷ್ಕರಣೆ (S.I.R)
  • ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ
    ಇವುಗಳ ಕುರಿತು ಚರ್ಚೆ ನಡೆಯಲಿದೆ.
    ⭐ ಈ ಸಭೆಗೆ ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ
    ಶ್ರೀ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ.
    📢 ಮಾಜಿ ಜಿ.ಪಂ ಮತ್ತು ತಾ.ಪಂ ಸದಸ್ಯರು, ಪ.ಪಂ ಮತ್ತು ಗ್ರಾ.ಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
    🗣️ ಈ ಕುರಿತು ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್,
    ಎಂಎಡಿಬಿ & ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡ,
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್,
    ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ ತಿಳಿಸಿದ್ದಾರೆ

Leave a Reply

Your email address will not be published. Required fields are marked *