https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಗೋಮಾಳ ಜಾಗದ ಅಕ್ರಮ ಒತ್ತುವರಿ ತೆರವಿಗೆ ತಹಶೀಲ್ದಾರ್‌ಗೆ ಮನವಿತೀರ್ಥಹಳ್ಳಿ:

ಗೋಮಾಳ ಜಾಗದ ಅಕ್ರಮ ಒತ್ತುವರಿ ತೆರವಿಗೆ ತಹಶೀಲ್ದಾರ್‌ಗೆ ಮನವಿತೀರ್ಥಹಳ್ಳಿ:

ತಾಲ್ಲೂಕಿನ ತ್ರಿಣಿವೆ ಗ್ರಾಮದ ಸರ್ವೇ ನಂ. 74ರಲ್ಲಿ ಇರುವ ಗೋಮಾಳ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರ ಪರವಾಗಿ ಈ ದಿನ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಗ್ರಾಮದ ಸಾರ್ವಜನಿಕ ಬಳಕೆಗೆ ಮೀಸಲಾಗಿರುವ ಗೋಮಾಳ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ ಅಕ್ರಮ ಒತ್ತುವರಿ ಕಂಡುಬಂದಲ್ಲಿ ಕಾನೂನುಬದ್ಧವಾಗಿ ತೆರವುಗೊಳಿಸುವಂತೆ ಮನವಿ ಮಾಡಲಾಗಿದೆ.ಸಾರ್ವಜನಿಕ ಆಸ್ತಿಯಾಗಿರುವ ಗೋಮಾಳ ಜಾಗವನ್ನು ಸಂರಕ್ಷಿಸುವುದು ಹಾಗೂ ಅಕ್ರಮ ಒತ್ತುವರಿಯನ್ನು ತಡೆಗಟ್ಟುವುದು ಅಗತ್ಯವಾಗಿದ್ದು, ಈ ಕುರಿತು ತಹಶೀಲ್ದಾರ್ ಅವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *