https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಶಾಸಕ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ…!!

ಸಾಗರ: ಸರ್ಕಾರಿ ಬಾವಿ ಮುಚ್ಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಆರೋಪಿಸಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಈ ವಿಚಾರದಲ್ಲಿ ಹಾಲಪ್ಪ ಸೇರಿದಂತೆ ನಾಲ್ವರು ವ್ಯಕ್ತಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಾಗರದಲ್ಲಿರುವ ತಮ್ಮ ನಿವಾಸದ ಎದುರು ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ವಿವಾದಕ್ಕೆ ಕಾರಣವಾಗಿರುವ ಬಾವಿಯ ಹಿನ್ನೆಲೆಯನ್ನು ವಿವರಿಸಿದರು.

ಸ್ವಾಮಿ ವಿವೇಕಾನಂದ ಸಂಸ್ಥೆಯವರು ಹಿಂದೆ ಈ ಸ್ಥಳದಲ್ಲಿ ಗ್ರಂಥಾಲಯ ನಡೆಸುತ್ತಿದ್ದರು. ಅವರೇ ನಿರ್ಮಿಸಿದ್ದ ಬಾವಿ ಹಲವು ವರ್ಷಗಳಿಂದ ಸಾರ್ವಜನಿಕ ಬಳಕೆಯಲ್ಲಿ ಇರಲಿಲ್ಲ. ಸಂಸ್ಥೆಯ ಮನವಿಯ ಮೇರೆಗೆ ಪರ್ಯಾಯ ಸ್ಥಳದಲ್ಲಿ ಹೊಸ ಬಾವಿ ನಿರ್ಮಿಸಿಕೊಟ್ಟ ಬಳಿಕ, ಹಳೆಯ ಜಾಗದಲ್ಲಿದ್ದ ಬಾವಿಯನ್ನು ನಗರಸಭೆ ಮುಚ್ಚಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.

ಈ ಕುರಿತು ಸ್ವಾಮಿ ವಿವೇಕಾನಂದ ಸಂಸ್ಥೆಯವರಿಂದಲೂ ಸ್ಪಷ್ಟನೆ ದೊರೆತಿದೆ. ಆದರೆ, ಹಾಲಪ್ಪ ಅವರು ರಾಜಕೀಯ ಕಾರಣಗಳು ಹಾಗೂ ವಾಸ್ತು ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರಿ ಬಾವಿ ಮುಚ್ಚಲಾಗಿದೆ ಎಂಬ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಆರೋಪಿಸಿದರು.

ಚುನಾವಣೆ ಗಮನದಲ್ಲಿಟ್ಟುಕೊಂಡು ಆರೋಪ: ಬೇಳೂರುಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಇಂತಹ ವಿಚಾರಗಳನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಇದೇ ವೇಳೆ, ಹಾಲಪ್ಪ ಅವರು ಸಚಿವರಾಗಿದ್ದ ಅವಧಿಯಲ್ಲಿ ಸರ್ಕಾರಿ ಕೆರೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು.

ಮತದಾರರ ಪಟ್ಟಿಯ ವಿಚಾರದಲ್ಲೂ ವಾಗ್ದಾಳಿ

ಮತದಾರರ ಪಟ್ಟಿಗೆ ಸಂಬಂಧಿಸಿದ ಪ್ರಕ್ರಿಯೆ ಹಾಗೂ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧವೂ ಬೇಳೂರು ಅಸಮಾಧಾನ ವ್ಯಕ್ತಪಡಿಸಿದರು.ಎಸ್‌ವಿಆರ್ ಪ್ರಕ್ರಿಯೆಯಿಂದ ದೇಶದಾದ್ಯಂತ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಆರೋಪಿಸಿದ ಅವರು, ಮತದಾನದ ಹಕ್ಕು ಪಡೆಯಲು ಸಾರ್ವಜನಿಕರಿಂದ ಹೆಚ್ಚಿನ ಪ್ರಮಾಣದ ದಾಖಲೆಗಳನ್ನು ಕೇಳುತ್ತಿರುವುದು ಸರಿಯಲ್ಲ ಎಂದರು.ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಲ್ಲಿಕೆಯಾಗುತ್ತಿರುವ ಫಾರಂ ನಂ.7 ಅರ್ಜಿಗಳ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಬೇಳೂರು ಆರೋಪಿಸಿದರು. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮುಸ್ಲಿಂ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದರು.ಈ ಕುರಿತು ನ್ಯಾಯಾಲಯವೂ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬೇಳೂರು ಗೋಪಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Leave a Reply

Your email address will not be published. Required fields are marked *